ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಗಾಂಧಿ ನಗರ ಕ್ಷೇತ್ರದಿಂದ ಅಮಿತ್ ಶಾ (Amit Shah) 5 ಲಕ್ಷಗಳ ಮತದ ಅಂತರದಲ್ಲಿ ಭಾರೀ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್ ಅವರು ಅಮಿತ್ ಶಾ ಮುಂದೆ ಸ್ಪರ್ಧಿಸಿದರು.
ಬಿಜೆಪಿ ಇಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿಕೊಂಡು ಬಂದಿದೆ. ದೇಶದ ಬೇರೆ ಬೇರೆ ಕಡೆ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ಇದರ ಜತೆಗೆ ಕಾಂಗ್ರೆಸ್ ಮೈತ್ರಿಕೂಟ ಇಂಡಿಯಾ ಕೂಡ ಭಾರೀ ಪೈಪೋಟಿಯನ್ನು ನೀಡುತ್ತಿದೆ. ಗುಜರಾತ್‌ನ ಗಾಂಧಿನಗರ ನಗರ ಕ್ಷೇತ್ರದಿಂದ ಅಮಿತ್ ಶಾ ಎರಡನೇ ಭಾರೀ ಗೆಲುವು ಸಾಧಿಸಿದ್ದಾರೆ. ಇನ್ನು ಈ ಕ್ಷೇತ್ರದಿಂದ ಬೇರೆ ಬೇರೆ ಪಕ್ಷ ನಾಯಕರು ಈ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದಿದ್ದರು.