ಲೋಕಸಭಾ ಚುನಾವಣೆಯತ್ತ ಕಾಂಗ್ರೆಸ್ ಕಣ್ಣು: ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿ ಡಿಕೆ ಶಿವಕುಮಾರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೈಲೆಂಟ್ ಆಗಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ ಪಕ್ಷ ಸಜ್ಜುಗೊಳ್ಳುತ್ತಿದ್ದು, ಇದರ ಭಾಗವಾಗಿ ಕರ್ನಾಟಕದಲ್ಲೂ ಗೆಲುವಿನ ಲೆಕ್ಕಾಚಾರವೂ ಶುರುವಾಗಿದೆ.

ಇದೀಗ ಮುಸ್ಲಿಂ ಮತಗಳನ್ನು ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಲಾಗುತ್ತಿದ್ದು,ಇಂದು ಅಲ್ಪಸಂಖ್ಯಾತ ನಾಯಕರ ಮುಖಂಡರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಸಭೆ ಮಾಡಿದ್ದಾರೆ.

ಈ ವೇಳೆ ಮುಸ್ಲಿಂ ಮುಖಂಡರ ಸಭೆ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ​ಮಾತನಾಡಿದ್ದು, ಲೋಕಸಭಾ ಚುನಾವಣೆಗೆ ಮುಖಂಡರು ಹೆಚ್ಚಿನ ಟಿಕೆಟ್​​​ ಕೇಳಿದ್ದಾರೆ ಎಂದಿದ್ದಾರೆ.

ಅಲ್ಪಸಂಖ್ಯಾತರು ಹೆಚ್ಚಾಗಿರುವ ಕಡೆ ಅವರೇ ಸ್ಪರ್ಧಿಸಲು ಸಾಧ್ಯವಿಲ್ಲ. ಜನಸಂಖ್ಯೆಯ ಆಧಾರದ ಮೇಲೆ ಟಿಕೆಟ್​ ಹಂಚಿಕೆ ಮಾಡಬೇಕಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ವಿಧಾನಪರಿಷತ್​ಗೆ ನಾಮನಿರ್ದೇಶನಕ್ಕೆ ಹೆಸರು ಶಿಫಾರಸು ವಿಚಾರವಾಗಿ ಮಾತನಾಡಿದ ಅವರು, ಸದಸ್ಯರ ಹೆಸರು ಶಿಫಾರಸು ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!