Wednesday, July 6, 2022

Latest Posts

ಕೊಟ್ಟ ಭರವಸೆಯನ್ನು ಈಡೇರಿಸುವಲ್ಲಿ ಕಾಂಗ್ರೆಸ್ ವಿಫಲ: ಕೇಂದ್ರ ಸಚಿವ ಭಗವಂತ ಖೂಬಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………

ಹೊಸ ದಿಗಂತ ವರದಿ, ಕಲಬುರಗಿ:

ಹಿಂದಿನ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಗೆದ್ದು,ಕೊಟ್ಟಂತಹ ಭರವಸೆಗಳನ್ನು ಇಡೇರಿಸುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ಕೇಂದ್ರದ ನವೀಕರಿಸಬಹುದಾದ ಇಂಧನ, ರಾಸಾಯನಿಕ ಸಚಿವ ಭಗವಂತ ಖೂಬಾ ಆರೋಪಿಸಿದ್ದಾರೆ.
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ನಗರ ಪಾಲಿಕೆ ಚುನಾವಣೆಯಲ್ಲಿ ಸಮತೋಲನವಾಗಿ ಅಭಿವೃದ್ಧಿ ಮಾಡಿಲ್ಲ. ಸಿಮೀತ ವಾಡ೯ಗಳಲ್ಲಿ ಮಾತ್ರ ಅಭಿವೃದ್ಧಿ ಮಾಡಿದೆ ಎಂದರು.
ಭ್ರಷ್ಟಾಚಾರ ಮಾಡಿ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ತನ್ನ ಓಟ್ ಬ್ಯಾಂಕ್ ,ಗಾಗಿ ಜನರನ್ನು ಬಳಸಿಕೊಂಡಿದೆ ಎಂದರು.
ಬೇರೆ ಬೇರೆ ನಗರಗಳ ತುಲನೇ ಮಾಡಿದಾಗ, ಕಲಬುರಗಿ ನಗರ ಪಾಲಿಕೆ ಹಿಂದೆ ಬಿದ್ದಿದೆ. ಆದರೆ ಈ ಬಾರಿ ನಮ್ಮ ಕಾಯ೯ಕತ೯ರು ವಾಡ೯ಗಳ ಪ್ರತಿ ಮನೆ ಬಾಗಿಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಯೋಜನೆಯ ಬಗ್ಗೆ ತಿಳಿಸಿದ್ದಾರೆ ಎಂದರು.
ಹೀಗಾಗಿ ನಾವು ಒಟ್ಟಿನಲ್ಲಿ ಈ ನಗರ ಪಾಲಿಕೆ ಚುನಾವಣೆಯಲ್ಲಿ 30ಕ್ಕಿಂತ ಅಧಿಕ ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಎರಲಿದ್ದೇವೆ ಎಂದರು.
ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮ ಬಿಜೆಪಿ ಆಡಳಿತವಿದೆ. ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿ ಯಾಗಿ ಮಾಡುವ ಕನಸನ್ನು ನನಸು ಮಾಡಿ, ಅಧಿಕಾರ ಬಂದ ಮೇಲೆ ಕಾಂಗ್ರೆಸ್ ಮಾಡದ ಅನೇಕ ಕೆಲಸಗಳನ್ನು ಬಿಜೆಪಿ ಮಾಡಲಿದ್ದು, ಮುಂಬರುವ ಪಾಲಿಕೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗಳಿಗೆ ಮತ ಹಾಕಿ ಗೆಲ್ಲಿಸಿ ಎಂದು ಮನವಿ ಮಾಡಿದರು.
ವಿಧಾನ ಪರಿಷತ್ಸದಸ್ಯ ಶಶೀಲ ನಮೋಶಿ,ನಗರ ಬಿಜೆಪಿ ಅಧ್ಯಕ್ಷ ಸಿದ್ದಾಜೀ ಪಾಟೀಲ್, ವೆಂಕಟ್ ಪ್ರಸಾದ ಮಾಲೇಪಾಟಿ,ರಾಘವೇಂದ್ರ ಕುಲಕರ್ಣಿ,ಅರುಣ ಕುಲಕರ್ಣಿ ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss