ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ರಿಲೀಸ್: ಶೆಟ್ಟರ್‌ಗೆ ಸಿಕ್ಕಿತು ಟಿಕೆಟ್‌, 8 ಕ್ಷೇತ್ರಗಳು ಇನ್ನೂ ಬಾಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ರಿಲೀಸ್ ಆಗಿದ್ದು, ಒಟ್ಟು 7 ಕ್ಷೇತ್ರದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಪುಲಿಕೇಶಿನಗರ ಸೇರಿದಂತೆ ಒಟ್ಟು 8 ಕ್ಷೇತ್ರಗಳ ಪಟ್ಟಿಯನ್ನು ಬಾಕಿ ಉಳಿಸಿಕೊಂಡಿದೆ.

ಒಟ್ಟು 15 ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಬಾಕಿ ಉಳಿಸಿಕೊಂಡಿದ್ದ ಕೈ ಪಾಳಯ ಅಳೆದು ತೂಗಿ 7 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮೊದಲೇ ನಿರ್ಧರಿಸಿದಂತೆ ಹುಬ್ಬಳ್ಳಿ -ಧಾರವಾಡ ಕೇಂದ್ರಕ್ಕೆ ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಲಿಂಗಸೂರು : ದುರ್ಗಪ್ಪ ಎಸ್. ಹೊಲಗೇರಿ
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ : ಜಗದೀಶ್ ಶೆಟ್ಟರ್
ಹುಬ್ಬಳ್ಳಿ ಧಾರವಾಡ ಪಶ್ಚಿಮ : ದೀಪಕ್‌ ಚಿಂಚೋಳಿ
ಶಿಗ್ಗಾಂವಿ : ಮಹಮ್ಮದ್‌ ಯೂಸುಫ್‌ ಸವಣೂರು
ಹರಿಹರ : ನಂದಗಾವಿ ಶ್ರೀನಿವಾಸ್
ಚಿಕ್ಕಮಗಳೂರು : ಎಚ್.ಡಿ. ತಮ್ಮಯ್ಯ
ಶ್ರವಣಬೆಳಗೊಳ: ಎಂಎ. ಗೋಪಾಲಸ್ವಾಮಿ

ಬಾಕಿ ಉಳಿಸಿಕೊಂಡಿರುವ ಕ್ಷೇತ್ರಗಳು
ಪುಲಕೇಶಿ ನಗರ
ಸಿವಿ ರಾಮನ್ ನಗರ
ಮುಳಬಾಗಿಲು
ರಾಯಚೂರು ನಗರ
ಅರಕಲಗೂಡು
ಮಂಗಳೂರು ಉತ್ತರ
ಶಿಡ್ಲಘಟ್ಟ
ಕೆ ಆರ್ ಪುರಂ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!