ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಾಜಿ ಮುಖ್ಯಮಂತ್ರಿ ಜಗದೀಶ್ ಶೇಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಬಿ ಫಾರಂ ಪಡೆದುಕೊಂಡಿದ್ದಾರೆ.
ಇಂದು ನಡೆದ ಪತ್ರಿಕಾಗೋಷ್ಠಿ ಬಳಿಕ ಕೆಪಿಸಿಸಿ ಸಮಿತಿಯ ತಮ್ಮ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಗದೀಶ್ ಬಿ ಫಾರಂ ನೀಡಿದ್ದಾರೆ.
ಜಗದೀಶ್ ಶೆಟ್ಟರ್ ಅವರಿಗೆ ಬಿ ಫಾರಂ ನೀಡಿದ ಬಳಿಕ ಡಿ.ಕೆ.ಶಿವಕುಮಾರ್ ಅಭಿನಂದಿಸಿದ್ದಾರೆ. ಹುಬ್ಬಳ್ಳಿಗೆ ತೆರಳಿದ ಬಳಿಕ ರೋಡ್ ಶೋ ಮಾಡಿ ಬಳಿಕ ಶೆಟ್ಟರ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಹಿತಿ ಸಿಕ್ಕಿದೆ.