ಹೊಸದಿಗಂತವರದಿ,ಕಾರವಾರ:
ಹುಬ್ಬಳ್ಳಿ ಗಲಭೆಯ ಪ್ರಕರಣಗಳನ್ನು ವಾಪಸ್ ಪಡೆಯುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದ್ರೋಹಿಗಳು ಹಾಗೂ ಸಮಾಜ ಘಾತುಕರ ರಕ್ಷಣೆಗೆ ನಿಂತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಕಿಡಿಕಾರಿದ್ದಾರೆ.
ಗಲಭೆಕೋರರು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳೂ ಸೇರಿದಂತೆ ಪೊಲೀಸರೂ ಗಾಯಗೊಂಡಿದ್ದಾರೆ. ಇಂತಹ ಪ್ರಕರಣವನ್ನು ಕೈಬಿಡುವ ಮೂಲಕ ಸರ್ಕಾರ ಪೊಲೀಸ್ ಇಲಾಖೆ ಜಂಘಾಬಲವೆ ಉಡುಗುವಂತೆ ಮಾಡಿ, ದೇಶದ್ರೋಹಿಗಳ ಬೆಂಬಲಕ್ಕೆ ನಿಂತಂತಾಗಿದೆ. ಸರ್ಕಾರದ ಈ ನಿರ್ಧಾರ ಖಂಡನೀಯ.
ಕಾಂಗ್ರೆಸ್ ಸರ್ಕಾರದ ಓಲೈಕೆಯ ರಾಜಕಾರಣದಿಂದಾಗಿ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ನೀಡಿದಂತಾಗಲಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ರೂಪಾಲಿ ಎಸ್. ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.