ಕಾಂಗ್ರೆಸ್ ಸರ್ಕಾರಕ್ಕೆ ಇಂದು 100 ದಿನದ ಸಂಭ್ರಮ: ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದು ಇಂದಿಗೆ 100 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸಂತಸ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ನಾಡಿನ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ‘100 ದಿನಗಳು’ ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ’ ಎಂದು ಹೇಳಿದ್ದಾರೆ.

ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!