ಹೊಸದಿಗಂತ ಡಿಜಿಟಲ್‌ಡೆಸ್ಕ್:
ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಯಾಗಿದ್ದ ರೇವಂತ್ ರೆಡ್ಡಿ ಇಂದು ಕಾಂಗ್ರೆಸ್ ದೆಹಲಿಗೆ ತೆರಳಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ , ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಆಹ್ವಾನಿಸಿದ್ದಾರೆ.
ಬಳಿಕ ಈ ಕುರಿತು ಫೋಟೋಗಳನ್ನು ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ತೆಲಂಗಾಣದ ಮುಂದಿನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಶುಭಾಶಯಗಳು. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ. ನೀಡಿದ ಭರವಸೆಗಳನ್ನು ಕಾರ್ಯಗತಗೊಳಿಸುತ್ತದೆ. ನಾವು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಮತ್ತು ಜನರ ಸರ್ಕಾರವನ್ನು ನಿರ್ಮಿಸುತ್ತೇವೆ” ಎಂದು ಹೇಳಿದರು.
ಹೈದರಾಬಾದ್ ಎಲ್ಬಿ ಸ್ಟೇಡಿಯಂನಲ್ಲಿ ಗುರುವಾರ ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.