ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಛತ್ತೀಸ್‌ಗಢದ ಮುಂಗೇರ್ ಜಿಲ್ಲೆಯಲ್ಲಿ ನಡೆದ rallyಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಭುಪೇಶ್ ಬಘೇಲ್ ಮತ್ತು ಉಪ ಮುಖ್ಯಮಂತ್ರಿ ಟಿ.ಎಸ್.ಸಿಂಗ್ ದೇವ್ ನಡುವಿನ ರಾಜಕೀಯ ಒಪ್ಪಂದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್‌ನ ಕೆಟ್ಟ ಆಡಳಿತದ ಅಂತ್ಯದ ಮಾತುಗಳು ಕೇಳಿಬರುತ್ತಿದೆ. ಇದೀಗ ಕಾಂಗ್ರೆಸ್ ನ ‘ಬಿದಾಯಿ’ಯ ಕ್ಷಣಗಣನೆ ಶುರುವಾಗಿದೆ. ಐದು ವರ್ಷ ನಿಮ್ಮನ್ನು ಲೂಟಿ ಮಾಡಿದ ಕಾಂಗ್ರೆಸ್ ನಾಯಕರ ಬೀಳ್ಕೊಡುವ ಸಮಯ ಬಂದಿದೆ. ರಾಜ್ಯದಿಂದ ಕಾಂಗ್ರೆಸ್ ಕಿತ್ತೂಗೆಯಲು ರಾಜ್ಯದ ಜನರು ಉತ್ಸುಕರಾಗಿದ್ದಾರೆ. ಸಾರ್ವಜನಿಕರು ಇನ್ನು ಮುಂದೆ ಕಾಂಗ್ರೆಸ್ ಬಯಸುವುದಿಲ್ಲ ಎಂದು ಪ್ರಧಾನಿ ಹೇಳಿದರು.
ಕಾಂಗ್ರೆಸ್ ತನ್ನ ಹಿರಿಯ ನಾಯಕರನ್ನು ಪಕ್ಷದಿಂದ ಕೈಬಿಡುವುದರಿಂದ ಅವರನ್ನು ನಂಬಿದ ಜನರಿಗೆ ಮೋಸ ಮಾಡಿದಂತೆ, ಅಷ್ಟೇ ಅಲ್ಲದೆ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.