ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ಗೆ ಜನ ಆಶೀರ್ವಾದ ಮಾಡಿದ್ದಾರೆ. ಆದರೆ ಈ ಸರ್ಕಾರ ಮತದಾರರಿಗೆ ವರದಾನ ಆಗೋ ಬದಲು ಶಾಪಗ್ರಸ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ವಿದ್ಯುತ್ ದರ ಏರಿಕೆ ಮಾಡಿದ್ದಾರೆ. ಹಾಲಿನ ದರ ಮೂರು ಬಾರಿ ಏರಿಕೆ ಮಾಡಿದ್ದಾರೆ. ಈಗ ಮತ್ತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಸರ್ಕಾರಿ ಆಸ್ಪತ್ರೆ ಚಿಕಿತ್ಸೆ ವೆಚ್ಚವನ್ನು ಜಾಸ್ತಿ ಮಾಡಿದ್ದಾರೆ. ಬಡವರಿಗೆ ಬರೆ ಎಳೆಯೋ ಕೆಲಸ ಈ ಸರ್ಕಾರ ಮಾಡಿದೆ. ಈ ಸರ್ಕಾರ ಮತದಾರರಿಗೆ ಶಾಪ ಕೊಡುವ ಕೆಲಸ ಮಾಡಿದೆ ಎಂದು ಕಿಡಿಕಾರಿದ್ದಾರೆ.