ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಇಂಥ ಕೆಟ್ಟ ಘಟನೆಗಳು ನಡೆಯಲು ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ದೂರಿದರು. ಶಾಂತಿ ನೆಮ್ಮದಿಗೆ ಹೆಸರಾಗಿದ್ದ ಮಂಡ್ಯ ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಹಿಂದೆಂದೂ ಈ ಜಿಲ್ಲೆಯಲ್ಲಿ ಇಂಥ ಘಟನೆಗಳು ಆಗಿಲ್ಲ. ನಾಗಮಂಗಲದಲ್ಲಿ ಕೆಲ ದುಷ್ಟಶಕ್ತಿಗಳು ಬೆಂಕಿ ಹಾಕುವ ಕೆಲಸ ಮಾಡಿದವು. ಈಗ ಮದ್ದೂರಿನಲ್ಲಿಯೂ ಅಂತಹ ಶಕ್ತಿಗಳೇ ಜನರ ನೆಮ್ಮದಿ ಕೆಡಿಸುವ ಹುನ್ನಾರ ನಡೆಸಿವೆ ಎಂದು ಕಿಡಿಕಾರಿದ್ದಾರೆ.