ಹೊಸದಿಗಂತ ವರದಿ ಹಾಸನ :
ರಾಜ್ಯ ಸರ್ಕಾರ ಸಂಪೂರ್ಣ ದ್ವೇಷದ ರಾಜಕಾರಣ ಮಾಡುತ್ತಿದೆ. ಜಿಲ್ಲೆಯ ಅನೇಕ ಅಭಿವೃದ್ಧಿ ಕೆಳಗಳು ಅರ್ಥಕ್ಕೆ ನಿಂತಿವೆ, ಹಾಸನ ಯೂನಿವರ್ಸಿಟಿ ಮುಚ್ಚಲು ಹೊರಟಿದ್ದಾರೆ,12 ಕೋಟಿ ಮಳೆಹಾನಿಗೆ ಹಣ ಬಿಡುಗಡೆಯಾಗಿದ್ದು ಫಲಾನುಭವಿಗಳಿಗೆ ಹಂಚಿಕೆಯಾಗಿಲ್ಲ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಗಂಭೀರ ಆರೋಪ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನಡೆಸುತ್ತಿರುವ ದ್ವೇಷದ ರಾಜಕಾರಣದಿಂದ ಹಾಸನ ಜಿಲ್ಲೆಯಲ್ಲಿ ಕಾಮಗಾರಿಗಳೆಲ್ಲಾ ನಿಂತು ಹೋಗಿವೆ. ಹಾಸನ ಯೂನಿವರ್ಸಿಟಿ ಮುಚ್ಚಲು ಹೊರಟಿದ್ದಾರೆ. ಮುಚ್ಚುವ ಬದಲು ಅದಕ್ಕೆ ಬೇಕಾದ ಸೌಲಭ್ಯ ಒದಗಿಸಿ. ಹಾಸನ ಜಿಲ್ಲಾಸ್ಪತ್ರೆಯಲ್ಲಿ ಲೂಟಿ ನಡೆಯುತ್ತಿದೆ. ಹಿಮ್ಸ್‌ನ ನಿರ್ದೇಶಕರ ಮಾತು ನಡೆಯುತ್ತಿಲ್ಲ. ಹಾಸನ ಕೃಷಿ ಕಾಲೇಜನ್ನು ಮಂಡ್ಯ ಯುನಿವರ್ಸಿಟಿಗೆ ಸೇರಿಸುತ್ತಿದ್ದೀರಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ಈ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಜೆಡಿಎಸ್‌ನ ನಾಲ್ಕು ಶಾಸಕರು ಒಟ್ಟಾಗಿ ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಹೋರಾಟ ಮಾಡುತ್ತೇವೆ. ಹೋರಾಟಕ್ಕೆ ಬಿಜೆಪಿ ಶಾಸಕರ ಸಹಕಾರ ಕೋರುತ್ತೇವೆ ಎಂದು ಎಚ್ಚರಿಕೆ ನೀಡಿದರು
ಚೆಲುವರಾಯಸ್ವಾಮಿಗೆ ಎಚ್.ಡಿ.ರೇವಣ್ಣ ತಿರುಗೇಟು : ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ. ಅಧಿಕಾರಿಗಳು ಲೂಟಿ ಮಾಡಲು ಜಿ.ಪಂ. ಚುನಾವಣೆ ಮುಂದೂಡುತ್ತಿದ್ದಾರೆ. ಮಂಡ್ಯ ಜಿಲ್ಲೆಗೆ ಏನು ಬೇಕು ಚೆಲುವರಾಯಸ್ವಾಮಿ ಮಾಡಲಿ. ಮಂಡ್ಯ ಜನರ ಬಗ್ಗೆ ನನಗೆ ವಿಶ್ವಾಸವಿದೆ. ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ, ನನ್ನ ಕೊಡುಗೆ ಏನಿದೆ ಎಂಬುದನ್ನು ನೋಡಲಿ. ಮಂಡ್ಯ ಜಿಲ್ಲೆ ರಾಜಕೀಯವಾಗಿ ಶಕ್ತಿ ಕೊಟ್ಟಿದ್ದಾರೆ. ಮಂಡ್ಯಕ್ಕೆ ಏನು ಮಾಡಿದ್ದೇನೆ ಎಂದು ಚರ್ಚೆಗೆ ಬರಲಿ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿಗೆ ಎಚ್.ಡಿ.ರೇವಣ್ಣ ತಿರುಗೇಟು ನೀಡಿದರು.