July 19, 2026
Sunday, July 19, 2026
spot_img

ಕಾಂಗ್ರೆಸ್ ಸರ್ಕಾರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ: ಬಿ.ವೈ ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಬ್ ಧರಿಸಲು ಅವಕಾಶ ನೀಡಿರುವ ವಿಚಾರ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರ ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ವಿಭಜನೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗಿಂತ ಧಾರ್ಮಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದರು. ಹಿಜಬ್ ವಿಚಾರ ಇನ್ನೂ ನ್ಯಾಯಾಲಯದಲ್ಲಿರುವಾಗ ಸರ್ಕಾರ ಈ ರೀತಿಯ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ:

ಅಲ್ಪಸಂಖ್ಯಾತರ ಮತಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಯಾವುದೇ ಮಟ್ಟಕ್ಕೂ ಹೋಗುತ್ತಿದೆ. ಹಿಂದೂ ಸಮುದಾಯವನ್ನು ನಿರಂತರವಾಗಿ ಅವಮಾನ ಮಾಡುವ ಕೆಲಸ ನಡೆಯುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದರು. ಸರ್ಕಾರದ ಹಲವು ನಿರ್ಧಾರಗಳಲ್ಲಿ ಪ್ರಚೋದನೆ ಮತ್ತು ಸಮಾಜದಲ್ಲಿ ಭಿನ್ನಾಭಿಪ್ರಾಯ ಹುಟ್ಟುಹಾಕುವ ಉದ್ದೇಶ ಕಾಣುತ್ತಿದೆ ಎಂದರು.

ಇತ್ತೀಚಿನ ಉಪಚುನಾವಣೆ ಗೆಲುವಿನ ಬಳಿಕ ಸರ್ಕಾರ ಆತ್ಮವಿಶ್ವಾಸದಿಂದ ಇಂತಹ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಜನರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !