ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಗರಣಗಳು ಮತ್ತು ಜನವಿರೋಧಿ ಅಲೆಗಳಿಂದಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ನೆಲಕಚ್ಚಲಿದೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಬೊಮ್ಮಾಯಿ ಮಾತನಾಡಿ, ರಾಜ್ಯ ಸರ್ಕಾರ ರೈತರಿಗೆ ವಕ್ಸ್ ಆಸ್ತಿ ಹೆಸರಲ್ಲಿ ನೋಟಿಸ್ ಜಾರಿ ಮಾಡಿದ್ದು, ಸರ್ಕಾರದ ಕ್ರಮಕ್ಕೆ ರಾಜ್ಯಾದ್ಯಂತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ತಮ್ಮ ತಪ್ಪಿನ ಅರಿವಾಗಿ ನೊಟೀಸ್ ವಾಪಸ್ ತೆಗೆದುಕೊಳ್ಳಲು ಹೇಳಿದ್ದಾರೆ. ಸರ್ಕಾರ ಯಾವುದೇ ತಪ್ಪು ಮಾಡದಿದ್ದರೆ ರೈತರಿಗೆ ನೀಡಿದ್ದ ನೋಟಿಸ್ ಯಾಕೆ ವಾಪಸ್ ಪಡೆಯುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವ ಜಮೀರ್ ಹೇಳಿದ್ದಾರೆ. ಡಿಸಿಗಳು ಸಚಿವರ ಆದೇಶದ ಮೇರೆಗೆ ನೋಟೀಸ್ ನೀಡಿರುವುದಾಗಿ ಹೇಳಿದ್ದಾರೆ. ಈಗ ಜನ ತಿರುಗಿ ಬೀಳುತ್ತಾರೆ ಎನ್ನುವುದು ಗೊತ್ತಾದ ತಕ್ಷಣ ಯು ಟರ್ನ್ ಹೊಡೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.