ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಕುರ್ಚಿಗಾಗಿ ಕಾಂಗ್ರೆಸ್‍ನಲ್ಲಿ ಭಾರಿ ಪೈಪೋಟಿ ನಡೆಯುತ್ತಿದೆ. ಇದೇ ಕಾರಣಕ್ಕೆ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಈ ವೇಳೆ ಕಾಂಗ್ರೆಸ್ ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯ ಗೊಂದಲ ಸೃಷ್ಟಿಯಾಗಿತ್ತು. ಸಹಜವಾಗಿ ಈಗ ಸಿಎಂ ಸ್ಥಾನಕ್ಕೆ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ.
ಬಹಳ ದಿನ ಈ ಸರ್ಕಾರ ಮುಂದುವರೆಯುವುದಿಲ್ಲ. ಇಂತಹ ಬೆಳವಣಿಗೆಯಿಂದ ಆಡಳಿತ ಸಂಪೂರ್ಣ ಕುಸಿತವಾಗಲಿದೆ ಎಂದು ತಿಳಿಸಿದ್ದಾರೆ.