ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಅಧಿವೇಶನ ಆರಂಭಗೊಂಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಮುಗಿಬಿದ್ದಿದೆ.
ಒಂದೆಡೆ ಪ್ರತಿಪಕ್ಷ ಬಿಜೆಪಿ ಸದನದ ಬಾವಿಗಿಳಿದು ಪ್ರತಿಭಟನೆ ಆರಂಭಿಸಿದ್ದು, ಇತ್ತ ಹೊರಗಡೆ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ಅವರು ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಸೇರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಯಡಿಯೂರಪ್ಪ ಅವರು ತಮ್ಮ ಐದು ಭರವಸೆಗಳ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ಈಡೇರಿಸದಿರುವ ಬಗ್ಗೆ ನಮ್ಮ ಪ್ರತಿಭಟನೆ ಇದ್ದೇ ಇದೆ. ಈ ಹಿಂದೆ ನಮ್ಮ ಸರ್ಕಾರ ಜಾರಿಗೆ ತಂದಿರುವ ಮತಾಂತರ ಮತ್ತು ಗೋಹತ್ಯೆ ವಿರೋಧಿ ಕಾನೂನುಗಳನ್ನು ಹಿಂಪಡೆಯುವ ಸರ್ಕಾರದ ನಿಲುವನ್ನು ನಾವು ವಿರೋಧಿಸುತ್ತೇವೆ ಎಂದು ಅವರು ಹೇಳಿದರು.