ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಎಸ್‌ಎಸ್ ವಿರುದ್ಧದ ಸರ್ಕಾರದ ಆದೇಶ ಮೂಲ ಸಂವಿಧಾನದ ವಿರುದ್ಧವಾಗಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಒಂದು ಸ್ವತಂತ್ರ ದೇಶ ಇಲ್ಲಿ ವಾಕ್ ಸ್ವಾತಂತ್ರ್ಯ, ವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ, ಧಾರ್ಮಿಕ ಸ್ವಾತಂತ್ರ್ಯವಿದೆ. ಆದ್ದರಿಂದ ಆರ್‌ಎಸ್‌ಎಸ್‌ನಂತಹ ಸಂಸ್ಥೆಗಳ ಕಾರ್ಯಕ್ರಮಗಳಿಂದ ದೂರ ಉಳಿಯಲು ಆದೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಇತರ ಸಂಘಟನೆಗಳು ಪಥ ಸಂಚಲನಕ್ಕೆ ಅವಕಾಶ ಮಾಡಿಕೊಡಲು ಕೋರಿರುವ ಕುರಿತು ಮಾತನಾಡಿದ ಅವರು, ದೇಶದಲ್ಲಿ ಪಥಸಂಚಲನ ಕೋರುವ ಸಂಘಟನೆಗಳಿಗೆ ಅವಕಾಶ ಮಾಡಿಕೊಡಬೇಕು. ಪಥಸಂಚಲನ ಅವಕಾಶ ಕುರಿತ ವಿಚಾರದಲ್ಲಿ ನ್ಯಾಯಾಲಯ ಸರಿಯಾದ ತೀರ್ಮಾನ ಮಾಡಿದೆ. ಈ ವೇಳೆ ಶಾಂತಿ, ಸುವ್ಯವಸ್ಥೆ ಕಾಪಾಡಿ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದೆ. ಆದರೆ ಸರ್ಕಾರದ ಆದೇಶದಿಂದ ಗೊಂದಲ ಉಂಟಾಗಿದೆ ಎಂದು ಹೇಳಿದರು.
ಆರ್‌ಎಸ್‌ಎಸ್ ವಿರುದ್ಧದ ಕಾಂಗ್ರೆಸ್ ಸರ್ಕಾರದ ಆದೇಶ ಮೂಲ ಸಂವಿಧಾನದ ವಿರೋಧಿ: ಸಂಸದ ಬಸವರಾಜ ಬೊಮ್ಮಾಯಿ
                                    
