ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ತನಿಖೆ ನಡೆಸಿ ಶಿಕ್ಷೆ ನೀಡಬೇಕು. ಆದರೆ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಉದ್ದೇಶಪೂರ್ವಕ ನೀತಿ ಅನುಸರಿಸುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.
ನಗರದ ಜೆ.ಪಿ.ಭವನದಲ್ಲಿ ಮಾತನಾಡಿದ ಅವರು, ಮುನಿರತ್ನ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ಸಮಯದಲ್ಲಿ ಮಾತನಾಡಲು ಅನುಮತಿ ಇಲ್ಲ. ಸತ್ಯಾಂಶ ಬೆಳಕಿಗೆ ಬರಲಿ ಮತ್ತು ತನಿಖೆ ನಡೆಸಲಿ. ಯಾರೂ ಕಾನೂನಿಗಿಂತ ಮೇಲಲ್ಲ. ಪ್ರತಿಯೊಬ್ಬರು ದೇಶದ ಕಾನೂನುಗಳನ್ನು ಪಾಲಿಸಬೇಕು ಎಂದು ಉತ್ತರಿಸಿದ್ದಾರೆ.