ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರಿನಲ್ಲಿ ಇಂದು ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಚಿಕ್ಕಮಗಳೂರು ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ನಗರದ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನೆಲೆ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದ ಸಮಾವೇಶದ ಸ್ಥಳದಲ್ಲಿ ಶೋಧ ನಡೆಸಲಾಗುತ್ತಿದೆ.
ಚಿಕ್ಕಮಗಳೂರು ಎಸ್ಪಿ ವಿಕ್ರಂ ಆಮ್ಟೆ ನೇತೃತ್ವದಲ್ಲಿ ಗ್ಯಾರಂಟಿ ಸಮಾವೇಶ ನಡೆಯುವ ಸ್ಥಳ ಮತ್ತು ಸುತ್ತಮುತ್ತ ಸ್ಥಳಗಳನ್ನು ಪರಿಶೀಲನೆ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಜೆ ಜಾರ್ಜ್ ಭಾಗವಹಿಸಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳ ಫಲಾನುಭವಿಗಳು ಕೂಡ ಭಾಗವಹಿಸಲಿದ್ದಾರೆ.