ಶಾಂತಿಯ ತೋಟದಲ್ಲಿ ವಿಷ ಬೀಜ ಬಿತ್ತುವುದೇ ಕಾಂಗ್ರೆಸ್ ಗ್ಯಾರೆಂಟಿ: ಬಿಜೆಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮತ್ತೆ ಹಿಜಾಬ್ ಧರಿಸಲು ಸಿದ್ದರಾಮಯ್ಯ ಸರ್ಕಾರ ಅಧಿಕೃತವಾಗಿ ಅವಕಾಶ ಕೊಡೋಕೆ ರೆಡಿಯಾಗಿದೆ. ಉಡುಪು, ಊಟ ಅವರವರ ಇಷ್ಟ ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಬಿಜೆಪಿ ಮಾತನಾಡಿದ್ದು, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಅವರ ಗ್ಯಾರೆಂಟಿ.

ಶಾಲಾ ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಲು ಎಂದು ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದಕ್ಕೆ ಸುಪ್ರೀಂ ಕೋರ್ಟ್ ಸಹ ಸಮ್ಮತ ಸೂಚಿಸಿದೆ. ಆದರೆ ಸಿಎಂ ಸಿದ್ದರಾಮಯ್ಯ ಆದೇಶ ಹಿಂಪಡೆಯುವ ಮಾತನಾಡಿದ್ದಾರೆ.

ಮಕ್ಕಳಲ್ಲಿ ಸಮವಸ್ತ್ರ ವಿಷಯವಾಗಿ ಸಿಎಂ ಬೇಧವನ್ನು ಹುಟ್ಟು ಹಾಕುತ್ತಿದ್ದಾರೆ. ಪಿಎಫ್‌ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‌ಗಾಗಿ ಸಿದ್ದರಾಮಯ್ಯ ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ಪಾಠ ಕಲಿಸುತ್ತಾರೆ ಎಂದಿದ್ದಾರೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುತ್ತಾ ಬಟ್ಟೆ ಆಧಾರದ ಮೇಲೆ ಜನರನ್ನು ಬಿಜೆಪಿ ವಿಭಜಿಸುತ್ತಿದೆ ಎಂದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!