ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಕುರಿತಾದ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ದಲಿತರು ಮತ್ತು ಹಿಂದುಳಿದ ಸಮುದಾಯಗಳನ್ನು ಕಡೆಗಣಿಸಿದೆ ಮತ್ತು ಬಿಆರ್ ಅಂಬೇಡ್ಕರ್ ಅವರನ್ನು ಗೌರವಿಸುತ್ತಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದರು. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಕಾಂಗ್ರೆಸ್ ಯೋಜನೆ ರೂಪಿಸಿತ್ತು. ಅವರ ಗೌರವಾರ್ಥ ಸ್ಮಾರಕ ನಿರ್ಮಿಸುವಲ್ಲಿ ಕಾಂಗ್ರೆಸ್ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಆದರೆ, ಬಿಜೆಪಿ ಯಾವಾಗಲೂ ಅಂಬೇಡ್ಕರ್ ಅವರ ತತ್ವಗಳನ್ನು ಗೌರವಿಸುತ್ತದೆ. ಅಂಬೇಡ್ಕರ್ ಅವರ ಜೀವನಕ್ಕೆ ಸಂಬಂಧಿಸಿದ ಐದು ಪ್ರಮುಖ ಸ್ಥಳಗಳಾದ ಪಂಚತೀರ್ಥಗಳ ಅಭಿವೃದ್ಧಿ ಸೇರಿದಂತೆ ಅಂಬೇಡ್ಕರ್ ಅವರ ಪರಂಪರೆಯನ್ನು ಗೌರವಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.