ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ 5 ವಿಧಾನ ಪರಿಷತ್ ಸ್ಥಾನದ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ (Parishad Election) ಕಾಂಗ್ರೆಸ್ (Congress) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯೂರಿನ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮ ತಮ್ಮ ಪತಿ ಶ್ರೀನಿವಾಸ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೂರ್ಣಿಮ ವಾರದ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆ ಆಗಿದ್ದರು.
ಪೂರ್ಣಿಮ ಪತಿ ಶ್ರೀನಿವಾಸ್‌ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಘೋಷಿಸಲಾಗಿದೆ.
ಬೆಂಗಳೂರು ಪದವೀಧರರ ಕ್ಷೇತ್ರ – ರಾಮೋಜಿ ಗೌಡ
ಬೆಂಗಳೂರು ಶಿಕ್ಷಕರ ಕ್ಷೇತ್ರ – ಪುಟ್ಟಣ್ಣ
ನೈಋತ್ಯ ಶಿಕ್ಷಕರ ಕ್ಷೇತ್ರ – ಕೆಕೆ ಮಂಜುನಾಥ್
ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿಟಿ ಶ್ರೀನಿವಾಸ್
ಈಶಾನ್ಯ ಪದವೀಧರರು ಕ್ಷೇತ್ರ – ಡಾ. ಚಂದ್ರಶೇಖರ ಬಿ. ಪಾಟೀಲ್ ಹೆಸರನ್ನು ಘೋಷಿಸಲಾಗಿದೆ