ಕನ್ನಡಿಗರಿಗೆ ಕಾಂಗ್ರೆಸ್‌ನಿಂದ ಮಹಾದ್ರೋಹ.. ಇಷ್ಟಕ್ಕೂ ರಾಜ್ಯ ಸರ್ಕಾರ ಮಾಡಿದ್ದಾದ್ರೂ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಹೆಸರು ಇಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನ ಜೆಡಿಎಸ್ ಖಂಡಿಸಿದೆ.

ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್, ಕಾಂಗ್ರೆಸ್ ಕನ್ನಡಿಗರಿಗೆ ಮಹಾದ್ರೋಹ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದೆ.

ರಾಜ್ಯದಲ್ಲಿ ಗುಲಾಮಿ ಕಾಂಗ್ರೆಸ್ ಸರ್ಕಾರದ ತೊಘಲಕ್ ಆಡಳಿತ ಹೇಗಿದೆ ನೋಡಿ ಕರ್ನಾಟಕದ ಮಹಾಜನತೆ. ರಾಮನ ಹೆಸರಿನ “ರಾಮನಗರ” ಜಿಲ್ಲೆಯನ್ನು “ಬೆಂಗಳೂರು ದಕ್ಷಿಣ” ಎಂದು ವಿರೋಧವನ್ನು ಲೆಕ್ಕಿಸದೇ ಮರುನಾಮಕರಣ ಮಾಡಲಾಗಿದೆ. “ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ”ಕ್ಕೆ ಮಾಜಿ ಪಿಎಂ “ಮನಮೋಹನ್ ಸಿಂಗ್ ವಿವಿ ಬೆಂಗಳೂರು” ಎಂದು ಹೆಸರಿಡಲು ಈಗ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರದ ವಿಶ್ವಮಟ್ಟದಲ್ಲಿ ಬ್ರ‍್ಯಾಂಡ್ ಆಗಿದೆ. ಪರ್ಯಾಯಾವಾಗಿ ಮರುನಾಮಕರಣ ಮಾಡುವ ಅವಶ್ಯಕತೆ ಏನಿತ್ತು? ಅಧಿಕಾರದ ಮದ, ದರ್ಪ, ದುರಹಂಕಾರದಲ್ಲಿ ಮೆರೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!