ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಚುನಾವಣಾ ಪ್ರಚಾರ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಪ್ರಣಾಳಿಕೆಯು ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಅದೇ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆಯನ್ನು ಹೊಂದಿದೆ. ಈ ಮುಸ್ಲಿಂ ಲೀಗ್ ಪ್ರಣಾಳಿಕೆಯ ಉಳಿದ ಭಾಗಗಳಲ್ಲಿ ಎಡಪಂಥೀಯರು ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ವಿರುದ್ಧ ಕಾಂಗ್ರೆಸ್​​ ಚುನಾವಣಾ ಆಯೋಗಕ್ಕೆ ಮೋದಿ ವಿರುದ್ಧ ದೂರು ನೀಡಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್​​ನಲ್ಲಿ ಮಾಹಿತಿ ನೀಡಿದ್ದು, ನನ್ನ ಸಹೋದ್ಯೋಗಿಗಳಾದ @salman7khurshid, @Mukul Wasnik, @Pawankhera ಮತ್ತು @gurdeepsappal ಅವರು ಚುನಾವಣಾ ಆಯೋಗವನ್ನು ಭೇಟಿಯಾಗಿ 6 ​​ದೂರುಗಳನ್ನು ನೀಡಿದ್ದಾರೆ. ಎಲ್ಲರಿಗೂ ಸಮಾನವಾದ ವೇದಿಕೆಯನ್ನು ಚುನಾವಣಾ ಆಯೋಗ ನೀಡಬೇಕು. ಆಯೋಗವು ಸಾಂವಿಧಾನಿಕವಾಗಿ ನಡೆದುಕೊಳ್ಳುತ್ತದೆ ಎಂಬ ನಂಬಿಕೆ ಇದೆ ಎಂದರು. .

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್​​ನ ಈ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರು ‘ ಪ್ರಧಾನಿ ಮೋದಿ ಅವರ ಈ ಮಾತಿನಿಂದ ನಮಗೆ ಬೇಸರವಾಗಿದೆ. ನಮ್ಮ ಪ್ರಣಾಳಿಕೆಯ ಬಗ್ಗೆ ಅವರು ಹೇಳಿರುವುದು ಸುಳ್ಳು, ನೀವು ಎಲ್ಲಿ ಬೇಕಾದರೂ ನೀವು ನಮ್ಮ ಬಗ್ಗೆ ಮಾತನಾಡಬಹುದು, ಬೇರೆ ಪಕ್ಷದಲ್ಲಿ ಇಂತಹ ವಿಚಾರಗಳು ಇದೆ ಎಂದು ಹೇಳಬಹುದು, ಇದರಿಂದ ನಮ್ಮನ್ನು ವಿಭಜಿಸುವ ಪ್ರಯತ್ನವನ್ನು ನೀವು ಮಾಡಬಹುದು, ಆದರೆ ರಾಷ್ಟ್ರೀಯ ಚಳುವಳಿಯಲ್ಲಿ ಭಾಗವಹಿಸಿದ ನಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ಹೀಗೆ ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!