ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಟಿ, ಮಾಜಿ ಸಚಿವೆ ಉಮಾಶ್ರೀ , ಎಂಆರ್ ಸೀತಾರಾಮ್ ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ರವಾನಿಸಿದ್ದಾರೆ.
ಕಲಾವಿದರ ಕೋಟಾದಡಿ ಮಾಜಿ ಸಚಿವೆ, ನಟಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜಸೇವೆ ಹೆಸರಲ್ಲಿ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರಿಗೆ ಸ್ಥಾನ ನೀಡಲಾಗಿದೆ. ನಾಮನಿರ್ದೇಶನ ಕುರಿತು ಸಿದ್ದರಾಮಯ್ಯ ಅವರು ನಿನ್ನೆ ರಾಜ್ಯಪಾಲ ಥಾವರ್ ಚಂದ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.