ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದ್ದು ಮತ್ತೆ ಆಪರೇಷನ್ ಗೆ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಶನ್ ಮಾಡುತ್ತಿರುವುದು ಕಾಂಗ್ರೆಸ್ ನ ದುರ್ಬಲತೆ. ಟಿಕೆಟ್ ಸಿಗದೇ ಇದ್ದ ಕೆಲವರು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರೆ. ಅದರಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ ಎಂದರು.
ಇನ್ನು ಟಿಕೆಟ್ ಸಿಗದಿದ್ದವರು ಹೋಗುವುದು ಸಹಜ. ಅದರ ಬಗ್ಗೆ ನಾವೇನು ಹೆಚ್ಚು ತಲೆಕೆಡಿಸಿಕೊಳ್ಳಲ್ಲ. ಕಾಂಗ್ರೆಸ್ ನ ಈ ಆಪರೇಷನ್ ನಿಂದ ರಾಜಕೀಯವಾಗಿ ಯಾವುದೇ ಲಾಭವಾಗುವುದಿಲ್ಲ ಎಂದು ಬೊಮ್ಮಾಯಿ ಹೇಳಿದರು.