ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ಯಾವಾಗ ಅಧಿಕಾರದಿಂದ ತೊಲಗುತ್ತದೆಯೋ ಎಂಬುದು ಜನರ ಭಾವನೆಯಾಗಿದೆ. ಅವರ ಭಾವನೆಯಂತೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ರಾಜ್ಯಾದ್ಯಂತ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊರಾಟ ಆರಂಭಿಸಿದೆ. ಕರ್ನಾಟಕ ಸರ್ಕಾರ ಎಲ್ಲ ವಸ್ತುಗಳ ಬೆಲೆ ಏರಿಸಿದೆ. ಹಾಲು, ಅಲ್ಕೋಹಾಲು, ಎಲೆಕ್ಟ್ರಿಸಿಟಿ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಳ ಮಾಡಿದೆ. ಸರ್ಕಾರ ದಿವಾಳಿಯಾಗಿದೆ. ಬರುವಂತಹ ದಿನಗಳಲ್ಲಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಮಾಹಿತಿ ಇದೆ ಎಂದು ಹೇಳಿದರು.
ರಾಜ್ಯದಲ್ಲಿ ಬಡವರ ಬದುಕು ಭಾರವಾಗಿದೆ. ಗ್ಯಾರೆಂಟಿಯನ್ನೂ ಸರಿಯಾಗಿ ನೀಡದೇ ದೊಡ್ಡ ಪ್ರಮಾಣದ ತೆರಿಗೆಯ ಭಾರವನ್ನು ಜನರ ಮೇಲೆ ಹಾಕಿದ್ದಾರೆ. ಹಾಲಿನ ಸಬ್ಸಿಡಿ ರೈತರಿಗೆ ಕೊಡುವ ಬದಲು ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಅದರ ವಿರುದ್ಧ ಜನರ ಧ್ವನಿಯಾಗಿ ಹೋರಾಟ ನಡೆಸಿದ್ದೇವೆ ಎಂದು ಹೇಳಿದರು.