ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ನವರಿಗೆ ಇಲ್ಲ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ಹೊಸದಿಗಂತ ವರದಿ, ಮೈಸೂರು:

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಕಾಂಗ್ರೆಸ್‌ನವರಿಗೆ ಇಲ್ಲ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವೆ ಮೀನಾಕ್ಷಿ ಲೇಖಿ ಹೇಳಿದರು.
ಶುಕ್ರವಾರ ಮೈಸೂರಿನ ವಾಣಿ ವಿಳಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು , ಕಾಂಗ್ರೆಸ್‌ನ ಅಧಿನಾಯಕ ಸೋನಿಯಾ ಗಾಂಧಿ ಹಾಗೂ ಅವರ ಅಳಿಯ ವಾದ್ರ, ಮಗ ರಾಹುಲ್ ಗಾಂಧಿ,ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸೇರಿದಂತೆ, ಕಾಂಗ್ರೆಸ್ ಬಹುತೇಕ ನಾಯಕರು ಭ್ರಷ್ಟಾಚಾರದ ಆರೋಪದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗಿದ್ದಾರೆ. ಹಲವರು ಜೈಲಿಗೆ ಕೂಡ ಹೋಗಿ ಬಂದಿದ್ದಾರೆ. ಇಂತಹ ನಾಯಕರನ್ನು ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಶೇಕಡ 40ರಷ್ಟು ಕಮಿಷನ್ ಭ್ರಷ್ಟಾಚಾರ ನಡೆಸಿದ ಎಂದು ಆರೋಪಿಸುವುದಕ್ಕೆ ಯಾವ ನೈತಿಕತೆ ಇದೆ ಎಂದು ಖಾರವಾಗಿ ಪ್ರಶ್ನಿಸಿದರು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಇವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ವಿನಹ, ಆರೋಪಿಗಳಿಗೆ ಸಂಬoಧಿಸಿದoತೆ ಯಾವುದೇ ದಾಖಲಾತಿಗಳನ್ನು ನೀಡುತ್ತಿಲ್ಲ. ಇವರ ಆರೋಪಗಳನ್ನ ಜನರು ನಂಬುವುದೇ ಇಲ್ಲ ಎಂದರು.
ಬಿಜೆಪಿ ಬಿಜೆಪಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿದೆ. ದೇಶದ ಎಲ್ಲಾ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಡಳಿತವನ್ನು ಮೆಚ್ಚಿ, ಮತದಾರರು ಬಿಜೆಪಿಗೆ ಮತ ನೀಡಿ ಗೆಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಕೂಡ ಮತದಾರರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವಾರು ಜನಪಯೋಗಿ ಕಾರ್ಯಕ್ರಮಗಳನ್ನು ಮೆಚ್ಚಿ, ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟವಾದ ಬಹುಮತವನ್ನು ನೀಡುವುದರೊಂದಿಗೆ ಸರ್ಕಾರವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸ್ವಾತಂತ್ರ್ಯ ಬಂದು 75 ವರ್ಷವಾಗಿರುವ ಭಾರತಕ್ಕೆ ಇನ್ನು 25 ವರ್ಷಗಳಲ್ಲಿ ನೂರು ವರ್ಷವಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತವನ್ನು ಅಮೃತಕಾಲದೊಡೆಗೆ ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡು ಹೋಗುತ್ತಿದ್ದಾರೆ. ಕರ್ನಾಟಕದಲ್ಲಿ ಕೂಡ ಜನರು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವ ಮೂಲಕ ಈ ರಾಜ್ಯವನ್ನು ಕೂಡ ಅಮೃತಕಾಲಕ್ಕೆ ತೆಗೆದುಕೊಂಡು ಹೋಗಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್‌ನಲ್ಲಿ ಸಮರ್ಥ ನಾಯಕರೇ ಇಲ್ಲ. ರಾಹುಲ್ ಗಾಂಧಿ ನಾಯಕತ್ವ ವಹಿಸಿಕೊಂಡಿದ್ದಾರೆ. ಆದರೆ ಅವರ ನಾಯಕತ್ವದಲ್ಲಿ ಏನಾದರೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ರಾಜ್ಯ ಮತ್ತು ದೇಶವೇ ಅಭಿವೃದ್ಧಿಯಲ್ಲಿ ಹಿಂದುಳಿಯಲಿದೆ ಎಂದು ಹೇಳಿದರು ಕರ್ನಾಟಕ ರಾಜ್ಯ ಬಂಡವಾಳ ಹೂಡಿಕೆಯಲ್ಲಿ ಮೊದಲ ಸ್ಥಾನಕ್ಕೆ ಬರುತ್ತಿದೆ. ಸುಮಾರು 400ಕ್ಕೂ ಹೆಚ್ಚು ಕಂಪನಿಗಳಲ್ಲಿ ವಿದೇಶಿ ಬಂಡವಾಳಗರು ಹೂಡಿಕೆ ಮಾಡುತ್ತಿದ್ದಾರೆ. ಕರ್ನಾಟಕ ತನ್ನದೇ ಆದ ಅಭಿವೃದ್ಧಿ, ಜಿಎಸ್‌ಟಿ ಸಂಗ್ರಹದ ಕೊಡುಗೆಯನ್ನು ದೇಶಕ್ಕೆ ನೀಡುತ್ತಿದೆ. ಕರ್ನಾಟಕ ಡಬಲ್ ಇಂಜಿನ್ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದುತ್ತಿದೆ. ನಾನು ಬೆಂಗಳೂರಿನಿoದ ಮೈಸೂರಿಗೆ ದಶಪಥರ ರಸ್ತೆಯಲ್ಲಿ ಬಂದೆ. ಪ್ರಯಾಣ ನನಗೆ ಬಹಳ ಖುಷಿಯಾಯಿತು ಈ ರಸ್ತೆಯನ್ನು ತುಂಬಾ ಚೆನ್ನಾಗಿ ಅಭಿವೃದ್ಧಿ ಮಾಡಿದ್ದಾರೆ. ಅಲ್ಲದೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ದೇಶದ ವಿಮಾನ ನಿಲ್ದಾಣಗಳಿಗೆ ಸಂಪರ್ಕವನ್ನು ಕಲ್ಪಿಸಲಾಗಿದೆ. ರಾಜ್ಯದ ರಾಜ್ಯದ ಜನರು ಮೋದಿ ಆಡಳಿತವನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಈ ಬಾರಿ ಚುನಾವಣೆಯಲ್ಲಿ 75 ಮಂದಿ ಹೊಸಮುಖಗಳಿಗೆ ಟಿಕೆಟ್ ನೀಡಿ ಚುನಾವಣೆಗೆ ಇಳಿಸಿದೆ. ನನಗೆ ನಿಜಕ್ಕೂ ಇಷ್ಟೊಂದು ಹೊಸ ಮುಖಗಳಿಗೆ ಟಿಕೆಟ್ ನೀಡುವುದು ಅಚ್ಚರಿಯನ್ನುಂಟು. ಆದರೆ ಈ ಎಲ್ಲಾ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಯಾವುದೇ ಅನುಮಾವಿಲ್ಲ. ಯಾಕೇಂದರೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷದ ಸಂಘಟನೆ ಕೆಲಸವನ್ನು ಮಾಡುತ್ತಿದ್ದಾರೆ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಜನರು ಮೋದಿ ಆಡಳಿತವನ್ನು ಮೆಚ್ಚಿ ಮತ ಹಾಕಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳೆಲ್ಲರೂ ಚುನಾವಣೆಯಲ್ಲಿ ಗೆದ್ದು ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು .
ಪಕ್ಷದಿಂದ ಯಾವುದೇ ನಾಯಕರು ಹೊರಹೋದರು ಅದರಿಂದ ಯಾವುದೇ ಹಾನಿ ಪಕ್ಷಕ್ಕೆ ಹಾಗುವುದಿಲ್ಲ. ಯಾಕೆಂದರೆ ಬಿಜೆಪಿ ಕಾರ್ಯಕರ್ತರ ಪಕ್ಷ. ಕಾರ್ಯಕರ್ತರೇ ಈ ಪಕ್ಷಕ್ಕೆ ಶಕ್ತಿ. ಅಲ್ಲದೆ ಜನರು ಪಕ್ಷಕ್ಕೆ ಮತ ನೀಡುವುದು ಮೋದಿ ಆಡಳಿತವನ್ನು ಮೆಚ್ಚಿ, ಯಾವುದೇ ಸ್ಥಳೀಯ ನಾಯಕರಿಗಲ್ಲ. ಕರ್ನಾಟಕದ ವಿಧಾನಸಭೆ ಚುನಾವಣೆ ಪಕ್ಷದ ಎಲ್ಲರೂ ನಾಯಕತ್ವದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು. ಸುದ್ದಿಗೋಷ್ಠಿಯಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೇ ಶ್ರೀನಿವಾಸಗೌಡ, ಮೈಸೂರು ವಿಭಾಗ ಬಿಜೆಪಿ ಮಾಧ್ಯಮ ಕೇಂದ್ರದ ಸಂಯೋಜಕ ನಾಗೇಶ್, ಜಿಲ್ಲಾ ಸಹ ವಕ್ತಾರ ಡಾ. ಕೆ ವಸಂತಕುಮಾರ್, ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಸಹ ಸಂಚಾಲಕ ಕೇಬಲ್ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!