July 24, 2026
Friday, July 24, 2026
spot_img

ಕಾಂಗ್ರೆಸ್ ಹೈಕಮಾಂಡ್‌ನಿಂದ ದಿಢೀರ್ ಆದೇಶ: ಹೊಸ ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ಗೆ ಪಟ್ಟಾಭಿಷೇಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ನಾಟಕ ರಾಜಕಾರಣದಲ್ಲಿ ಇಂದು ಮತ್ತೊಂದು ಪ್ರಮುಖ ರಾಜಕೀಯ ಬದಲಾವಣೆ ನಡೆದಿದೆ. ಡಿ. ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ತಮ್ಮ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಿರಿಯ ಕಾಂಗ್ರೆಸ್ ನಾಯಕ ಬಿ. ಕೆ. ಹರಿಪ್ರಸಾದ್‌ನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಡಿಕೆಶಿ ರಾಜೀನಾಮೆ ಪತ್ರ ರವಾನೆ:
ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ಹಿನ್ನೆಲೆಯಲ್ಲಿ ‘ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ’ ನಿಯಮದಂತೆ ಡಿ.ಕೆ. ಶಿವಕುಮಾರ್ ತಮ್ಮ ರಾಜೀನಾಮೆ ಪತ್ರವನ್ನು ಹೈಕಮಾಂಡ್‌ಗೆ ಕಳುಹಿಸಿಕೊಟ್ಟಿದ್ದಾರೆ.

ತಕ್ಷಣದಿಂದಲೇ ಜಾರಿಗೆ:
ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಬಿ. ಕೆ. ಹರಿಪ್ರಸಾದ್ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸಿದ್ದರಾಮಯ್ಯ ಬಲವಾದ ಬೆಂಬಲ:
ಹಿಂದುಳಿದ ವರ್ಗದ ಪ್ರಭಾವಿ ನಾಯಕರಾಗಿರುವ ಬಿ. ಕೆ. ಹರಿಪ್ರಸಾದ್ ಹೆಸರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಪ್ರಬಲವಾಗಿ ಪ್ರತಿಪಾದಿಸಿದ್ದರು ಎನ್ನಲಾಗಿದೆ.

ಸತೀಶ್ ಜಾರಕಿಹೊಳಿಗೆ ತಪ್ಪಿದ ಅವಕಾಶ:
ಕೆಪಿಸಿಸಿ ಅಧ್ಯಕ್ಷತೆಗಾಗಿ ಸಚಿವ ಸತೀಶ್ ಜಾರಕಿಹೊಳಿ ಬಲವಾದ ಪೈಪೋಟಿ ನಡೆಸಿದ್ದರಾದರೂ, ಅವರು ನೂತನ ಸಂಪುಟ ಸೇರಿದ್ದರಿಂದ ಕೊನೆಕ್ಷಣದಲ್ಲಿ ಬಿ.ಕೆ. ಹರಿಪ್ರಸಾದ್‌ಗೆ ಅದೃಷ್ಟ ಒಲಿದಿದೆ.

ವಿಧಾನ ಪರಿಷತ್ ಟಿಕೆಟ್ ಭಾಗ್ಯ:
ಅಧ್ಯಕ್ಷ ಸ್ಥಾನದ ಜೊತೆಗೆ ಮುಂಬರುವ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್‌ನ ಅಧಿಕೃತ ನಾಲ್ಕು ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಬಿ.ಕೆ. ಹರಿಪ್ರಸಾದ್‌ಗೆ ಹೈಕಮಾಂಡ್ ಟಿಕೆಟ್ ಕೂಡ ಘೋಷಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !