March 14, 2026
Saturday, March 14, 2026
spot_img

ಕ್ಯಾಬಿನೆಟ್ ಪುನರ್ ರಚನೆಗೆ ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ: ಎಷ್ಟು ಸಚಿವರಿಗೆ ಕೊಕ್? ಕುತೂಹಲ ಕೆರಳಿಸಿದ ನಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:


ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನು ಭೇಟಿಯಾಗಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಇಂದು ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಲ್ಲದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಚರ್ಚಿಸಿ ಸಂಪುಟ ಪುನಾರಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ರಾಜ್ಯದಲ್ಲಿ 8ರಿಂದ 12 ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಯಾರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !