ತ್ರಿಶಂಕು ಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್: ಆರ್ ಅಶೋಕ್ ವ್ಯಂಗ್ಯ

ಹೊಸ ದಿಗಂತ ಡಿಜಿಟಿಲ್ ಡೆಸ್ಕ್:

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಈ ವಿಚಾರವಾಗಿ ಆರ್ ಅಶೋಕ್ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿ ಸ್ಥಾನವನ್ನ ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ ಕಾಂಗ್ರೆಸ್ ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಟ್ವೀಟ್ ನಲ್ಲಿ ರಾಜ್ಯದಲ್ಲಿ ‘ರಣದೀಪ್” ಆಡಳಿತ ಜಾರಿ ಆಗಿದೆಯಾ? ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಾ?ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ”ರಣದೀಪ್ ” ಆಡಳಿತ ಹೇರಿದೆ.

ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್ ಗಳಲ್ಲಿ ಅತೃಪ್ತ ಶಾಸಕಾರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ಸುರ್ಜೆವಲ ಅವರು, ಗುರುವಾರ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ.

ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ, ಡಿಸಿಎಂ DK ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ, ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು ರಾಹುಲ್ ಗಾಂಧಿ ಅವರಿಗೆ ಶಕ್ತಿ ಇಲ್ಲ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನವನ್ನ ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ ಕಾಂಗ್ರೆಸ್ ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!