ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಭ್ರಷ್ಟಾಚಾರದ ಮೂಲ ಕಾಂಗ್ರೆಸ್. ಸಿದ್ದರಾಮಯ್ಯನವರ ಬೆನ್ನಿಗೆ ಕಾಂಗ್ರೆಸ್ ಹೈಕಮಾಂಡ್ ಇದ್ದರೂ ಆಶ್ಚರ್ಯವಿಲ್ಲ. ಕಾಂಗ್ರೆಸ್ ಹೈಕಮಾಂಡ್ ಸದಾ ಭ್ರಷ್ಟಾಚಾರದಲ್ಲಿ ತೊಡಗಿದೆ. ಭ್ರಷ್ಟಾಚಾರವನ್ನು ಕಾಂಗ್ರೆಸ್ ಬೆಂಬಲಿಸುತ್ತದೆ. ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ ಮತ್ತು ಸೋನಿಯಾ ಅವರ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಅವಧಿಯಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದ ಉತ್ತುಂಗದಲ್ಲಿದೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮೊದಲು, ಕಾಂಗ್ರೆಸ್ ಅನ್ನು ವಿಶ್ವದ ಅತ್ಯಂತ ಭ್ರಷ್ಟ ರಾಜಕೀಯ ಪಕ್ಷವೆಂದು ಪರಿಗಣಿಸಲಾಗಿತ್ತು. ಹಾಗಾಗಿ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರನ್ನು ಬೆಂಬಲಿಸಲಿದೆ ಎಂದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಅನುಮೋದನೆ ನೀಡಿದ್ದಾರೆ. ಸಿದ್ದರಾಮಯ್ಯ ಅವರೆ ನಿಮಗೆ ಆತ್ಮಸಾಕ್ಷಿ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿ ತನಿಖೆಗೆ ಸಹಕರಿಸಿ. ನೀವು ನಿರಪರಾಧಿ ಎಂಬುದು ಸಾಬೀತಾದರೆ ಸಿಎಂ ಹುದ್ದೆಗೆ ಹಿಂತಿರುಗಿ. ನೀವು ನಿಮ್ಮನ್ನು ನಂಬುತ್ತೀರಾ? ಎಂದು ಪ್ರಶ್ನಸಿದ್ದಾರೆ.