ಹೊಸದಿಗಂತ ಡಿಜಿಟಲ್ ಡೆಸ್ಕ್:
ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನ ಅಸ್ಥಿರಗೊಳಿಸಲು ವಾಮಮಾರ್ಗ, ಮೋಸದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ನಿಗ್ರಹಿಸಲಿ.
ಇದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜಾಹೀರಾತು! ಇಂದು ಬೆಳ್ಳಂಬೆಳಗ್ಗೆಯೇ ಎಲ್ಲಾ ಪತ್ರಿಕೆಗಳ ಮುಖಪುಟದಲ್ಲೇ ಮೊಳಗಿದ ಜಾಹೀರಾತಿದು. ದಸರಾ ಶುಭಾಶಯ ಕೋರುವ ಜಾಹೀರಾತು ನೆಪದಲ್ಲೇ ವಿರೋಧ ಪಕ್ಷಕ್ಕೆ ಕಾಂಗ್ರೆಸ್ ಕೌಂಟರ್ ಕೊಟ್ಟಿದೆ.
ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ, ಇದು ಸರ್ಕಾರದ ಅಸ್ಥಿರಗೊಳಿಸಲು ಬಿಜೆಪಿಯಿಂದ ಷಡ್ಯಂತ್ರ ಅಂತಾ ಆರೋಪಿಸುತ್ತಲೇ ಬಂದಿದ್ದಾರೆ. ಇದೀಗ ದಸರಾಗೆ ಶುಭಾಶಯ ಕೋರುವ ಸರ್ಕಾರದ ಜಾಹೀರಾತಿನ ಮೂಲಕ ಬಿಜೆಪಿ ಹಾಗೂ ಜೆಡಿಎಸ್ಗೆ ಕಾಂಗ್ರೆಸ್ ತಿರುಗೇಟು ಕೊಟ್ಟಿದೆ. ವಾಮಮಾರ್ಗದಿಂದ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಯುವುದಿಲ್ಲ ಎಂದು ದೋಸ್ತಿ ನಾಯಕರಿಗೆ ಜಾಹೀರಾತು ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಂದು ತಿರುಗೇಟು ನೀಡಿದೆ.