ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಚುನಾವಣೆಯ ಪೂರ್ವಭಾವಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಧುಲೆಯಲ್ಲಿ ಭರ್ಜರಿ ಪ್ರಚಾರವನ್ನು ಪ್ರಾರಂಭಿಸಿದ್ದಾರೆ.
ಇನ್ನು ಭಾಷಣದ ವೇಳೆ ಪ್ರಧಾನಿ ಮೋದಿ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಮಾತನಾಡಿ, “ಪಂಡಿತ್ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯಂತಹ ನಾಯಕರು ಮೀಸಲಾತಿ ವಿರೋಧಿ ನೀತಿಗಳನ್ನು ವಿಶೇಷವಾಗಿ ಒಬಿಸಿ ಮತ್ತು ಬುಡಕಟ್ಟು ಸಮುದಾಯಗಳನ್ನು ಗುರಿಯಾಗಿಸಿಕೊಂಡು ಜಾರಿಗೊಳಿಸುತ್ತಿದ್ದರು” ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.
ಒಬಿಸಿಗಳು ಮತ್ತು ಬುಡಕಟ್ಟು ಗುಂಪುಗಳ ನಡುವಿನ ಪ್ರಸ್ತುತ ವಿಭಜನೆಯು ಭಾರತದ ವಿರುದ್ಧದ ಪಿತೂರಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.