ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೆ ಕೊರೋನಾ ದೃಢಪಟ್ಟಿದೆ.
ಜ್ವರದಿಂದ ಬಳಲುತ್ತಿದ್ದ ಸೋನಿಯಾ ಗಾಂಧಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಇರುವುದು ದೃಢಪಟ್ಟಿದೆ. ಇದರಿಂದ ಅವರು ಮನೆಯಲ್ಲಿಯೇ ಐಸೋಲೇಟ್​ ಆಗಿದ್ದಾರೆ ಎಂದು ಪಕ್ಷ ತಿಳಿಸಿದೆ.
ನ್ಯಾಷನಲ್ಡ್​ ಹೆರಾಲ್ಡ್​ ಹಗರಣ ಕುರಿತಂತೆ ಅವರು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವ ಮೊದಲುಕೊರೋನಾ ತುತ್ತಾಗಿ ಬಳಿಕ ಚೇತರಿಸಿಕೊಂಡಿದ್ದರು. ಬಳಿಕ ವೈದ್ಯರ ನೇತೃತ್ವದಲ್ಲಿ ಮೂರು ದಿನ ಇಡಿ ವಿಚಾರಣೆ ಎದುರಿಸಿದ್ದರು. ಇದೀಗ ಎರಡನೇ ಬಾರಿಗೆ ಕೊರೊನಾ ತಗುಲಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!