ದಿಗಂತ ವರದಿ ವಿಜಯಪುರ:
ಕಾಂಗ್ರೆಸ್ ಒಂದೇ ಬಣವಾಗಿದ್ದು, ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಎಚ್.ಸಿ. ಮಹಾದೇವಪ್ಪ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬಣದ ಮಧ್ಯೆ ಮುಖ್ಯಮಂತ್ರಿ ಹುದ್ದೆಗೆ ಗುದ್ದಾಟದ ಕುರಿತು ಜಿಲ್ಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಒಂದೇ ಬಣ, ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಡಿಕೆಶಿ ಬಣದ ಶಾಸಕರರಿಗೆ ಟಾಂಗ್ ನೀಡಿದರು.
ಮುಖ್ಯಮಂತ್ರಿ ಹುದ್ದೆಯಲ್ಲಿ ಸಿದ್ದರಾಮಯ್ಯ ಕೆಲಸ ಮಾಡುತ್ತಿದ್ದಾರೆ. ಕೆಲಸಕ್ಕೆ ಬಾರದವರು ಚರ್ಚೆ ಮಾಡುತ್ತಿದ್ದಾರೆ ಎಂದರು.