ಸೆಪ್ಟೆಂಬರ್‌ 7ರಿಂದ ಭಾರತ್‌ ಜೋಡೋ ಯಾತ್ರೆ ನಡೆಸಲು ಸಜ್ಜಾದ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಮುಂಬರುವ 2024ರ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು‌ ಸೆಪ್ಟೆಂಬರ್‌ 7ರಿಂದ ʼಭಾರತ್‌ ಜೋಡೋʼ ಯಾತ್ರೆಯನ್ನು ನಡೆಸಲು ಕಾಂಗ್ರೆಸ್‌ ಸಜ್ಜಾಗಿದೆ. ಈ ಕುರಿತು ಅಧಿಕೃತವಾಗಿ ಪಕ್ಷವು ಘೋಷಿಸಿದೆ.

ಮೂಲಗಳ ಪ್ರಕಾರ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಯಾತ್ರೆ ಆರಂಭವಾಗಲಿದ್ದು, ಕಾಶ್ಮೀರದಲ್ಲಿ ಮುಕ್ತಾಯವಾಗಲಿದೆ. ಯಾತ್ರೆಯು 12 ರಾಜ್ಯಗಳಲ್ಲಿ 3,500 ಕಿಲೋಮೀಟರ್ ದೂರವನ್ನು ಕ್ರಮಿಸಲಿದೆ. ಯಾತ್ರೆಯು ಸುಮಾರು 150 ದಿನಗಳ ಕಾಲ ನಡೆಯಲಿದೆ.

ರಾಹುಲ್ ಗಾಂಧಿ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎಐಸಿಸಿ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿರುವುದಾಗಿ ಮೂಲಗಳು ವರದಿ ಮಾಡಿವೆ.

ಈ ವರ್ಷದ ಕಾಂಗ್ರೆಸ್‌ನ ಚಿಂತನಾ ಶಿಬಿರದ ನವ ಸಂಕಲ್ಪದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆಯನ್ನು ಘೋಷಿಸಿದ್ದರು. ದಿಗ್ವಿಜಯ ಸಿಂಗ್ ಅವರು ಭಾರತ್ ಜೋಡೋ ಯಾತ್ರೆಯ ಸಂಘಟನಾ ಸಮಿತಿಯ ಉಸ್ತುವಾರಿ ವಹಿಸಿದ್ದಾರೆ.

“ಭಾರತದ ‘ವೈವಿಧ್ಯತೆಯಲ್ಲಿ ಏಕತೆ’ ಮತ್ತು ‘ಸರ್ವ ಧರ್ಮ ಸಮಭಾವ’ವನ್ನು ನಂಬುವ ಭಾರತದ ಎಲ್ಲ ಜನರನ್ನು ‘ಜೋಡೋ ಇಂಡಿಯಾ’ ನಡೆಸಲು ಭಾರತದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಜಿಜಿ ಪಾರಿಖ್ ಜಿ ಕರೆ ನೀಡಿದ್ದಾರೆ ಎಂದು ದಿಗ್ವಿಜಯ್‌ ಸಿಂಗ್‌ ಸರಣಿ ಟ್ವೀಟ್‌ಗಳ ಮೂಲಕ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!