Friday, July 1, 2022

Latest Posts

ಲಸಿಕೆ ಹಾಕುವುದರ ಬದಲು ಲಸಿಕೆ ಬಗ್ಗೆ ಅನುಮಾನ ಹುಟ್ಟುಹಾಕುವಲ್ಲಿ ಕಾಂಗ್ರೆಸ್ ನಿರತ: ಸಚಿವ ಡಾ. ಹರ್ಷವರ್ಧನ್ ತಿರುಗೇಟು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ನಿರ್ವಹಣೆ ಕುರಿತು ಸರ್ಕಾರದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರ ಪತ್ರಕ್ಕೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿರುಗೇಟು ನೀಡಿದ್ದಾರೆ.
ದೇಶದಲ್ಲಿ ಕೊರೋನಾ ಎರಡನೇ ಅಲೆ ಕುರಿತು ಕಾಂಗ್ರೆಸ್ ಆಡಳಿತದ ರಾಜ್ಯಗಳಿಂದ ಪ್ರಚೋದನೆ ಪಡೆದುಕೊಂಡಿದೆ. ಜನರಿಗೆ ಲಸಿಕೆ ಹಾಕುವುದರ ಬದಲು ಲಸಿಕೆಗಳ ಕುರಿತು ಅನುಮಾನ ಹುಟ್ಟುಹಾಕುವಲ್ಲಿ ಕಾಂಗ್ರೆಸ್ ನಿರತವಾಗಿದೆ ಎಂದು ದೂರಿದರು.
ಕೊರೋನಾ ವಿರುದ್ಧದ ಹೋರಾಟದಲ್ಲಿ ಪ್ರಮುಖವಾಗಿರುವ ಲಸಿಕಾ ಮಹತ್ವವನ್ನು ಸಿಂಗ್ ಅರ್ಥ ಮಾಡಿಕೊಂಡಿದ್ದರೂ ಕೆಲವು ಕಾಂಗ್ರೆಸ್ ನಾಯಕರು ನೀಡಿದ ಬೇಜವಾಬ್ದಾರಿ ಹೇಳಿಕೆಗಳಿಂದ ರಾಷ್ಟ್ರೀಯ ಸರಾಸರಿ ಲಸಿಕಾ ಕಾರ್ಯಕ್ರಮಕ್ಕೆ ಅಡ್ಡಿಯಾಗಿದೆ. ಹಿರಿಯ ನಾಗರಿಕರು ಹಾಗೂ ಕೊರೋನಾ ವಿರುದ್ಧದ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವಲ್ಲಿಯೂ ಕಾಂಗ್ರೆಸ್ ಆಡಳಿತದ ಸರ್ಕಾರಗಳು ಹಿಂದುಳಿದಿವೆ ಎಂದು ದೂರಿದರು.
ಸೋಮವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಮನಮೋಹನ್ ಸಿಂಗ್, “ಲಸಿಕಾ ಕಾರ್ಯಕ್ರಮಕ್ಕೆ ಇನ್ನಷ್ಟು ವೇಗ ತುಂಬಬೇಕು. ಇದಷ್ಟೇ ಕೊರೊನಾ ಪಿಡುಗಿನ ನಿಯಂತ್ರಣಕ್ಕೆ ಇರುವ ದಾರಿ. ಸರ್ಕಾರ ಇಂತಿಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎಂದು ಸಂಖ್ಯೆ ಹೇಳುವುದಕ್ಕಿಂತ ಶೇಕಡಾವಾರು ಪ್ರಮಾಣವನ್ನು ಗಣನೆಗೆ ತೆಗೆದುಕೊಳ್ಳಬೇಕು” ಎಂದು ಹೇಳಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss