ಅಧಿಕಾರಕ್ಕಾಗಿ ತಿರುಕನ ಕನಸು ಕಾಣುತ್ತಿರುವ ಕಾಂಗ್ರೆಸ್​ : ಬಿ.ಎಸ್​ . ಯಡಿಯೂರಪ್ಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಪಕ್ಷದ ನಾಯಕರಲ್ಲಿ ಎಲ್ಲರೂ ಮುಖ್ಯಮಂತ್ರಿ ಆಗುವ ಬಗ್ಗೆ ಹಗಲು ಕನಸು ಕಾಣ್ತಾ ಇದ್ದಾರೆ. ಅವರದ್ದು ತಿರುಕನ ಕನಸು, ಅದು ನನಸಾಗೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಟೀಕಿಸಿದ್ದಾರೆ.

ತುರುವೇಕೆರೆಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ನಿರೀಕ್ಷೆ ಮೀರಿ ಜನಬೆಂಬಲ ಸಿಗ್ತಾ ಇದೆ. ಇದೆಲ್ಲ ನೋಡಿದ್ರೆ 140ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಬಲದೊಂದಿಗೆ, ನಾವು ಮತ್ತೆ ಅಧಿಕಾರಕ್ಕೆ ಏರೋದನ್ನ ಯಾರಿಂದಲೂ ತಡೆಯೋದಕ್ಕಾಗಲ್ಲ. ಕೇಂದ್ರ ಮತ್ತು ರಾಜ್ಯದಿಂದ ಮೂರು ಸರ್ವೇ ಮಾಡಲಾಗಿದೆ ಎಂದು ಬಿಎಸ್​ವೈ ತಿಳಿಸಿದರು.

ಮೂರು ಸರ್ವೇನಲ್ಲೂ 130ರಿಂದ 140 ಸೀಟ್ ಪಡೆಯೋದಾಗಿ ರಿಪೋರ್ಟ್ ಬಂದಿದೆ. ಈ ರಿಪೋರ್ಟ್ ನೋಡಿಯೇ ಕಾಂಗ್ರೆಸ್ ಪಕ್ಷದವರಿಗೆ ದಿಗಿಲು ಹುಟ್ಟಿದೆ. ಹಾಗಾಗಿ ಕಾಂಗ್ರೆಸ್ ಉಚಿತ ಯೋಜನೆಗಳನ್ನ ಘೋಷಣೆ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯದಲ್ಲಿ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ: ಇದುವರೆಗೂ ಉದ್ಯೋಗ ಕೊಡದೆ ಇದ್ದವರು ಈಗ ನಿರುದ್ಯೋಗ ಭತ್ಯೆ ಕೊಡಲು ಹೊರಟಿದ್ದಾರೆ. ಅಧಿಕಾರಕ್ಕೆ ಬರದೇ ಇರುವಂತಹ ಪಕ್ಷ ಏನಾದ್ರೂ ಭರವಸೆಗಳನ್ನ ನೀಡಬಹುದು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!