ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಡವರ ಮನೆ ಅನ್ನ ಕಿತ್ತುಕೊಂಡಿರುವ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಕೇವಲ ಲಂಚಕ್ಕಾಗಿ ಪರಿಷ್ಕರಣೆ ನೆಪದಲ್ಲಿ ಬಿಪಿಎಲ್ ಕಾರ್ಡುಗಳನ್ನು ಸರ್ಕಾರ ರದ್ದು ಮಾಡುತ್ತಿದೆ, ಅದರಿಂದ ಸಂಗ್ರಹವಾಗುವ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ ಅಂತ ಸರ್ಕಾರದ ವಿರುದ್ಧ ಕಿಡಿಕಾರುತ್ತಿರುವ ಅತೃಪ್ತ ಕಾಂಗ್ರೆಸ್ ಶಾಸಕರಿಗೆ ನೀಡುವ ಪ್ಲಾನ್ ಸರ್ಕಾರದ್ದು ಎಂದು ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರು ಗ್ಯಾರಂಟಿ ಯೋಜನೆಗಳ ವಿರುದ್ಧ ಅಭಿಯಾನವೊಂದನ್ನು ಶುರುಮಾಡಿ, ಗ್ಯಾರಂಟಿ ಯೋಜನೆಗಳು ಇನ್ನು ಸಾಕು ನಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿ ಅಂತ ಒತ್ತಾಯಿಸಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.