ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಕೋಮಾ ಸ್ಟೇಜಲ್ಲಿರೋ ಬೀಳೋ ನುಗ್ಗೆ ಮರ ಇದ್ದ ಹಾಗೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನನ್ನ ಕಾಂಗ್ರೆಸ್‌ನವರು ನೇಮಿಸಿದ್ರೆ, ಅವರು ಹೇಳಿದ ಹಾಗೆ ರಾಜೀನಾಮೆ ಕೊಡಬಹುದಿತ್ತು. ನನ್ನನ್ನು ನೇಮಿಸಿರುವುದು ಬಿಜೆಪಿ, ಈ ದೇಶದಲ್ಲಿ ಎಲ್ಲಾ ರಾಜ್ಯದಲ್ಲಿರುವ ಪಾರ್ಟಿ ಬಿಜೆಪಿ. ಕಾಂಗ್ರೆಸ್‌ನವರು ಎಲ್ಲೋ ಎರಡು ಕಡೆ ಅಧಿಕಾರದಲ್ಲಿದ್ದಾರೆ. ಕಾಂಗ್ರೆಸ್ ಸರ್ಕಾರ ಬೀಳೋ ಹಂತದಲ್ಲಿರುವ ನುಗ್ಗೆ ಮರ ಇದ್ದ ಹಾಗೆ. ಕಾಂಗ್ರೆಸ್‌ನವರಿಂದ ಪಾಠ ಕಲಿಯುವ ಅಗತ್ಯ ನನಗಿಲ್ಲ. ನಮ್ಮದು ಇಡೀ ಪ್ರಪಂಚದಲ್ಲಿರುವ ನಂಬರ್ ಒನ್ ಪಾರ್ಟಿ ಎಂದು ತಿರುಗೇಟು ನೀಡಿದ್ದಾರೆ.