ಮತದಾರರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ ಮಾಡುತ್ತಿದೆ ಕಾಂಗ್ರೆಸ್: ಎ.ನಾರಾಯಣಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದ ಮತದಾರರನ್ನು ಭಿಕ್ಷುಕರ ಸಾಲಿನಲ್ಲಿ ನಿಲ್ಲಿಸುವ ಷಡ್ಯಂತ್ರವನ್ನು ಕಾಂಗ್ರೆಸ್ ಮಾಡುತ್ತಿದೆ. ಈ ಚುನಾವಣೆಯನ್ನು ಸಿದ್ದಾಂತದ ಆಧಾರದಲ್ಲಿ ಗೆಲ್ಲದೆ, ಗ್ಯಾರೆಂಟಿಗಳ ಆಧಾರದಲ್ಲಿ ಗೆದ್ದಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.

ಚಿತ್ರದುರ್ಗದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಚುನಾವಣೆ ಪಾರದರ್ಶಕವಾಗಿದ್ದಾಗ ಸಂವಿಧಾನ ಮತ್ತು ಬದ್ಧತೆ ತೋರಿಸಿದಂತಾಗುತ್ತದೆ ಎಂದರು.

ಮತದಾರರನ್ನು ಬಿಕ್ಷುಕರ ಸಾಲಿನಲ್ಲಿ ನಿಲ್ಲಿಸುತ್ತೇವೆ, ಗ್ಯಾರೆಂಟಿ ಕೊಟ್ಟು ಚುನಾವಣೆ ಎದುರಿಸುತ್ತೇವೆ ಎನ್ನುವ ಸ್ವಭಾವದ ಮೂಲಕ, ಕಾಂಗ್ರೆಸ್ ಭವಿಷ್ಯದ ದಿನಗಳಲ್ಲಿ ಮತದಾರರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ ಮಾಡುತ್ತಿದೆ ಎಂದು ಹೇಳಿದರು.

ಸಿದ್ದಾಂತದಿಂದ ಚುನಾವಣೆ ಗೆದ್ದಿದ್ದೇವೆ ಎಂದು ಹೇಳುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಳೆದ 15 ದಿನಗಳಿಂದ ರಾಜ್ಯವನ್ನು ಹೇಗೆ‌ ಮುನ್ನಡೆಸಬೇಕು ಎನ್ನುವ ಚರ್ಚೆಗಿಂತ ಗ್ಯಾರೆಂಟಿ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಮೂಲ ಸೌಕರ್ಯ, ರೈತರ ಸಮಸ್ಯೆ ಬಿಟ್ಟು ಇಂಥಹ ಚರ್ಚೆಗಳನ್ನು ಬಿಟ್ಟು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಗುಡುಗಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!