ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಇನ್ನು ಹೆಚ್ಚು ದಿನ ಅಧಿಕಾರದಲ್ಲಿ ಮುಂದುವರಿಯುವುದಿಲ್ಲ ಅನ್ನೋ ಭಾವನೆಯಿಂದ ಯಾವೊಬ್ಬ ಸಚಿವರು ಮಾತನ್ನು ಕೇಳುತ್ತಿಲ್ಲ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಎಂದು ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ನೀಡಿರುವ ಸರ್ಟಿಫಿಕೇಟ್ ಹಾಗೂ 20 ತಿಂಗಳ ಬಳಿಕ ಸರ್ಕಾರ ಟೇಕಾಫ್ ಆಗುತ್ತಿದೆ ಎಂದು ಸಚಿವ ಡಿ.ಸುಧಾಕರ್ ನೀಡಿರುವ ಹೇಳಿಕೆ ಸರ್ಕಾರದ ಕಾರ್ಯ ವೈಖರಿಗೆ ಕನ್ನಡಿ ಹಿಡಿದಿವೆ ಎಂದರು.
ನಾಯಕತ್ವ ಬದಲಾವಣೆ ರಾದ್ಧಾಂತ, ಭ್ರಷ್ಟಾಚಾರ, ಲೂಟಿಯಲ್ಲೇ ಇಡೀ ಸರ್ಕಾರ ಮುಳುಗಿ ಹೋಗಿದೆ. ದರ ಏರಿಕೆ ಬರೆ ಮೂಲಕ ಜನ ಸಾಮಾನ್ಯರನ್ನು ರಣ ಹದ್ದುಗಳಂತೆ ಕುಕ್ಕಿ ತಿನ್ನುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ತಾಂಡವಾಡುತ್ತಿದೆ ಎಂದು ಅಶೋಕ್ ದೂರಿದ್ದಾರೆ.