ದೇಶದ ಎಲ್ಲ ಸಮಸ್ಯೆಗಳಿಗೂ ಕಾಂಗ್ರೆಸ್ ಕಾರಣ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಹಾರಾಷ್ಟ್ರದಲ್ಲಿ ತಮ್ಮ ಮೊದಲ ಚುನಾವಣಾ ರ್‍ಯಾಲಿ ನಡೆಸಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷವನ್ನು ಹಾಗಲಕಾಯಿಗೆ ಹೋಲಿಸಿದ ಮೋದಿ ಅವರು, ತುಪ್ಪದ ಜತೆ ಹುರಿದರೂ ಅಥವಾ ಸಕ್ಕರೆ ಜತೆ ಬೆರೆಸಿದರೂ ಅದರ ರುಚಿ ಬದಲಾಗುವುದಿಲ್ಲ, ಅದೇ ರೀತಿ ಕಾಂಗ್ರೆಸ್ ಪಕ್ಷವು ದೇಶದ ಎಲ್ಲ ಸಮಸ್ಯೆಗಳ ಮೂಲವಾಗಿದೆ ಎಂದು ಹೇಳಿದ್ದಾರೆ.

ದೇಶದ ಎಲ್ಲ ಸಮಸ್ಯೆಗಳಿಗೂ ಕಾಂಗ್ರೆಸ್ ಕಾರಣ. ಧರ್ಮದ ಆಧಾರದ ಮೇಲೆ ದೇಶ ವಿಭಜನೆಯಾಗಲು ಯಾರು ಕಾರಣ? ಕಾಶ್ಮೀರ, ನಕ್ಸಲಿಸಂ? ರಾಮ ಮಂದಿರ ನಿರ್ಮಾಣವನ್ನು ವಿರೋಧಿಸಿದ್ದು ಮತ್ತು ರಾಮನ ಅಸ್ತಿತ್ವವನ್ನು ಪ್ರಶ್ನಿಸಿದ್ದು ಯಾರು? ರಾಮ ಮಂದಿರದ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದರು ಯಾರು?’ ಎಂದು ಅವರು ಚಂದ್ರಪುರದಲ್ಲಿ ನೆರೆದಿದ್ದ ಜನರನ್ನು ಪ್ರಶ್ನಿಸಿದರು.

ಕಳೆದ ಹತ್ತು ವರ್ಷಗಳಿಂದ ಕಾಂಗ್ರೆಸ್ ಅಧಿಕಾರದಿಂದ ಹೊರಗಿದ್ದು, ದೇಶದ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ನಮಗೆ ಸಾಧ್ಯವಾಗಿದೆ ಎಂದು ಹೇಳಿದ ಮೋದಿ, ಚಂದ್ರಪುರದ ಕಟ್ಟಿಗೆಯನ್ನು ಅಯೋಧ್ಯೆಯ ರಾಮಮಂದಿರ ನಿರ್ಮಾಣ ಮತ್ತು ದೆಹಲಿಯ ಸಂಸತ್ ಭವನದ ನಿರ್ಮಾಣಕ್ಕೆ ಬಳಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!