Wednesday, August 10, 2022

Latest Posts

ಬೆಂಬಲ ನೀಡುವ ನೆಪದಲ್ಲಿ ಕಾಂಗ್ರೆಸ್ ಅಸ್ಥಿತ್ವಕ್ಕಾಗಿ ಹುಡುಕಾಟ: ಬಿ.ವೈ.ವಿಜಯೇಂದ್ರ

ಹೊಸದಿಗಂತ ವರದಿ, ಚಿತ್ರದುರ್ಗ:

ಕಾಂಗ್ರೆಸ್ ಪಕ್ಷ ದೇಶದಲ್ಲಿ ದಿನೇ ದಿನೇ ಅಸ್ಥಿತ್ವ್ವ ಕಳೆದುಕೊಳ್ಳುತ್ತಿದೆ. ಅದರಂತೆ ರಾಜ್ಯದಲ್ಲೂ ಅಸ್ಥಿತ್ವ ಕಳೆದುಕೊಳ್ಳುತ್ತಿದ್ದು, ಅಸ್ಥಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತರು ಜೈಶ್ರೀರಾಮ್ ಎಂದು ಕೂಗಿದ್ದೇ ತಪ್ಪಾಯಿತೆ?. ಘೋಷಣೆ ಕೂಗಿದವರ ಮೇಲೆ ಶಾಸಕ ಸಂಗಮೇಶ್ವರ್ ಬೆಂಬಲಿಗರು ದಬ್ಬಾಳಿಕೆ ಮಾಡಿ ತುಘಲಕ್ ದರ್ಬಾರ್ ನಡೆಸಿದ್ದಾರೆ. ಅವರಿಗೆ ಬೆಂಬಲಿಸುವ ನೆಪದಲ್ಲಿ ಕಾಂಗ್ರೆಸ್ ಅಸ್ಥಿತ್ವ ಹುಡುಕುವ ಪ್ರಯತ್ನ ಮಾಡಿದೆ ಎಂದರು.

ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೂಂಡಾವರ್ತನೆ ನಡೆಯುವುದಿಲ್ಲ. ಅದಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೋವಿಡ್ ಸಂದರ್ಭ ಸೇರಿದಂತೆ ಮೂರು ಬಾರಿ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಿದ್ದಾರೆ. ಹಾಗಾಗಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss