ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟು, ಮತಬ್ಯಾಂಕ್‌ ಗಟ್ಟಿಮಾಡಿಕೊಳ್ತಿದೆ: ಬೊಮ್ಮಾಯಿ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಾಂಗ್ರೆಸ್ ನಾಯಕರು ಡಾ.ಬಿ.ಆರ್‌ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವಕ್ಕೆ ವಿರುದ್ಧವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ‌ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ಜನರಿಗೆ ಮೋಸ ಮಾಡುತ್ತಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡಿರುವುದು ಅಸಂವಿಧಾನಿಕ ನಾವು ಅದನ್ನೇ ಬದಲಾಯಿಸಿದ್ದೇವು. ಈಗ ಅದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿದೆ. ಇದು ಸುಪ್ರೀಂ ಕೋರ್ಟ್‌ನಲ್ಲಿ ಇದೆ ಎನ್ನುವುದು ಗೊತ್ತಿದ್ದರೂ, ನಾವು ಹಿಂದುಳಿದ ವರ್ಗದವರಿಗೆ ಕೊಡಿತ್ತಿದ್ದೇವೆ ಎಂದು ಹೇಳಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವುದು ಸಂವಿಧಾನ ಬಾಹಿರ, ಕಾನೂನು ಬಾಹಿರ ಎಂದು ಹೇಳಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!