ಬಿಜೆಪಿ ಬೆಳವಣಿಗೆಯಿಂದ ಕಾಂಗ್ರೆಸ್ ಹೆದರಿ ಪಾದಯಾತ್ರೆ ಮಾಡುತ್ತಿದೆ: ಜಗದೀಶ್ ಶೆಟ್ಟರ್

ಹೊಸದಿಗಂತ ವರದಿ ಹುಬ್ಬಳ್ಳಿ:

ಬಿಜೆಪಿ ಬೆಳವಣಿಗೆಯಿಂದ‌ ಭಯ ಭೀತರಾದ ಕಾಂಗ್ರೆಸ್ ನಾಯಕರು ಪಾದಯಾತ್ರೆ ಹಾಗೂ ಸಮಾವೇಶ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದವರು ಎಐಸಿಸಿ ಅಧ್ಯಕ್ಷರಾಗಿದ್ದು,ರಾಹುಲ್ ಗಾಂಧಿ ಪಾದಯಾತ್ರೆ ಹಾಗೂ ಕಾಂಗ್ರೆಸ್ ಹಲವಾರು ಸಮಾವೇಶಗಳು ರಾಜ್ಯದ ರಾಜಕೀಯದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ.‌ ಬಿಜೆಪಿಗೆ ಈ ಬೆಳವಣಿಗೆಯಿಂದ ಯಾವುದೇ ರೀತಿ ಭಯವು ಇಲ್ಲ ಎಂದರು.

ಏಳು ಕಡೆ ಉಪಚುನಾವಣೆ ನಡೆದಿವೆ ಅಲ್ಲಿ ಕಾಂಗ್ರೆಸ್ ಸುದ್ದಿ ಇಲ್ಲ. ಇತ್ತಿಚೇಗೆ ರಾಹುಲ್ ಗಾಂಧಿಯವರು ತೆಲಂಗಾಣದಲ್ಲಿ ಪಾದಯಾತ್ರೆ ಮಾಡಿದ್ದರು ಅಲ್ಲಿಯೂ ಸಹ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡಿದೆ ಎಂದು ಹೇಳಿದರು.‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!