ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರೋದಿಲ್ವೋ ಅಂಥ ರಾಜ್ಯಗಳಿಗೆ ಅನುದಾನ ನೀಡೋದಿಲ್ಲ. ಮೋದಿ ಸರ್ಕಾರದಲ್ಲಿ ಎಷ್ಟೊಂದು ಸಂಸ್ಥೆಗಳು ಸ್ಥಾಪನೆ ಆಗಿರಬಹುದು, ಆದರೆ ಉದ್ಯೋಗ ಸೃಷ್ಟಿ ಆಗಿಲ್ಲ ಎಂದು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ ಕಪ್ಪು ಪತ್ರದ ಪೋಸ್ಟರ್ ರಿಲೀಸ್ ಮಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬೆಲೆ ಏರಿಕೆ, ರೈತರ ಆದಾಯ ಅವರ ಜೀವನದ ಬಗ್ಗೆ ಕೇಂದ್ರ ಸರ್ಕಾರ ಯಾವೆಲ್ಲ ಕ್ರಮ ಕೈಗೊಂಡಿದೆ. ಸಾಮಾಜಿಕ ನ್ಯಾಯ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಪಕ್ಷವಾಗಿರುವ ಕಾರಣ ಅನುದಾನ ನೀಡುತ್ತಿಲ್ಲ ಎಂದಿದ್ದಾರೆ.