ಕಾಂಗ್ರೆಸ್‌-ಜೆಡಿಎಸ್‌ ಒಳ ಒಪ್ಪಂದ ಆರೋಪ: ಉಪ್ಪು ಹಿಡಿದು ಪ್ರಮಾಣ ಮಾಡಿದ ಸಿದ್ದೇಗೌಡ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಗಿದಿದ್ದು, ಫಲಿತಾಂಶಕ್ಕೂ ಮುನ್ನವೇ ಚಾಮುಂಡೇಶ್ವರಿ ಕ್ಷೇತ್ರದ ಕದನ ತಾರಕ್ಕಕ್ಕೇರಿದೆ. ಮಾವಿನಹಳ್ಳಿ ಸಿದ್ದೇಗೌಡ ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಕಾಣಿಸಿಕೊಂಡಿಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಪ್ರತಿಕ್ರಿಯಿಸಿದ್ದು, ಚುನಾವಣೆಯಲ್ಲಿ ನಾನು ಯಾವ ಒಳ ಒಪ್ಪಂದ ಮಾಡಿಕೊಂಡಿಲ್ಲ. ಇದೆಲ್ಲಾ ಮೂಲ ಕಾಂಗ್ರೆಸ್ಸಿಗರ ಪಿತೂರಿ. ನಾನು ಗೆಲ್ಲುತ್ತೇನೆ ಎಂದು ಈ ರೀತಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಒಳ ಒಪ್ಪಂದ ಆಗಿದೆ ಎನ್ನುವ ಆರೋಪಕ್ಕೆ ಉತ್ತರಿಸಿದ ಅವರು, ನಾನು ಖುದ್ದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಬಗ್ಗೆ ಸ್ಪಷ್ಟನೆ ನೀಡುತ್ತೇನೆ ಎಂದು ಉಪ್ಪನ್ನು ಮುಟ್ಟಿ ಮಾವಿನಹಳ್ಳಿ ಸಿದ್ದೇಗೌಡ ಪ್ರಮಾಣ ಮಾಡಿದ್ದಾರೆ.

ಸಿದ್ದರಾಮಯ್ಯನವರಿಗೆ ಈ ವಿಚಾರಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಚುನಾವಣೆಯಲ್ಲಿ ಬಳಲಿ ಬಂದವರಿಗೆ ಪ್ರಶ್ನೆ ಕೇಳಿದಾಗ ಈ ರೀತಿ ಹೇಳಿದ್ದಾರೆ ಅಷ್ಟೇ. ನಾನು ಖುದ್ದು ಅವರನ್ನು ಭೇಟಿ ಮಾಡಿ ಈ ಬಗ್ಗೆ ಮಾತನಾಡುತ್ತೇನೆ. ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ.ಈಗಲೂ ನನಗೆ ಗೆಲುವಿನ ವಿಶ್ವಾಸವಿದೆ. ನನ್ನ ಗೆಲುವಿನ ಅಂತರ ಕಡಿಮೆ ಆಗಬಹುದು.‌ ನಾನು ಒಂದು ಸಾವಿರ ಮತಗಳ ಅಂತರದಲ್ಲಾದರೂ ಗೆಲ್ಲುತ್ತೇನೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!