ಹೊಸ ದಿಗಂತ ವರದಿ,ಮೈಸೂರು:
ಕಾಂಗ್ರೆಸ್-ಜೆಡಿಎಸ್‌ನ ಮುಖಂಡರು, ಕಾರ್ಯಕರ್ತರು ಬಿಜೆಪಿ ಸಂಪರ್ಕದಲ್ಲಿದ್ದು, ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದರು.
ಮಂಗಳವಾರ ಸಂಜೆ ಮೈಸೂರಿನ ಲಲಿತಮಹಲ್ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ನಲ್ಲಿ ಹಲವು ನಾಯಕರು, ಮುಖಂಡರು, ಕಾರ್ಯಕರ್ತರು ಭ್ರಮನಿರಶನಗೊಂಡಿದ್ದಾರೆ. ಹಾಗಾಗಿ ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಪಕ್ಷಕ್ಕೆ ಬರುವವರನ್ನು ಸೇರಿಸಿಕೊಳ್ಳುವ ಕುರಿತು ಜಿಲ್ಲಾ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದ ತನಕ ಆಯಾ ಸ್ಥಳೀಯ ಮುಖಂಡರೊAದಿಗೆ ಚರ್ಚಿಸಿದ ಬಳಿಕ ತೀರ್ಮಾನಗಳಾಗುತ್ತವೆ ಎಂದು ಹೇಳಿದರು.